ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ.
ನಾಳೆ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿಕೆಯಾದ ಪರೀಕ್ಷೆ ಮಂಗಳವಾರ ನಡೆಯಲಿದೆ ಎಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಹೇಳಿದ್ದಾರೆ. ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಯನ್ನು ಮಂಗಳವಾರ ನಡೆಸಲಾಗುವುದು ಎಂದು ಹೇಳಲಾಗಿದೆ.