ಚಾಮರಾಜನಗರ: ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಸಾವಿನ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪುನೀತ್ ರಾಜಕುಮಾರ್ ಅಭಿಮಾನಿಯಾಗಿದ್ದ ಮುನಿಯಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ ಅವರಿಗೆ ಪುನೀತ್ ಅಂದ್ರೆ ಅಚ್ಚು ಮೆಚ್ಚು. ಟಿವಿಯಲ್ಲಿ ಪುನೀತ್ ಸಾವಿನ ಸುದ್ದಿಯನ್ನು ಕೇಳಿದ ಮುನಿಯಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.