ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪುನೀತ್ ಅಂತಿಮ ದರ್ಶನಕ್ಕೆ ಹೆಚ್ಚಿನ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆಗೆ ನಿರ್ಧರಿಸಲಾಗಿದೆ. ಈ ಬಗ್ಗೆ ರಾಜಕುಮಾರ್ ಕುಟುಂಬಸ್ಥರ ಜೊತೆಗೆ ಚರ್ಚಿಸಲಾಗಿದೆ. ಅಭಿಮಾನಿಗಳು ಶಾಂತ ರೀತಿಯಿಂದ ವರ್ತಿಸಬೇಕು ಎಂದು ಹೇಳಿದರು.
ಈ ಸ್ಥಳಗಳಿಗೆ ಭೇಟಿ ನೀಡಲು ಹೆದರ್ತಾರೆ ಜನ….!
ಇಂದು ಇಡೀ ದಿನ ಪುನೀತ್ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಬೇಕು. ಇನ್ನು ಪುನೀತ್ ಅವರ ಪುತ್ರಿ ಅಮೆರಿಕಾದಿಂದ ಆಗಮಿಸುತ್ತಿದ್ದು, ದೆಹಲಿಗೆ ಬಂದಿದ್ದಾರೆ. ಇಂದು ಸಂಜೆ 5 ಗಂಟೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ತಿಳಿಸಿದರು.