alex Certify BIG NEWS: ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ; ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ; ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದರೆ, ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದ್ದು, ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಇನ್ನು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗುವುದು ಎಂದು ಗೈಡ್ ಲೈನ್ ನಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...