ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಸಂಜೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳು ದರ್ಶನ ಪಡೆದುಕೊಂಡಿದ್ದು, ಈಗಲೂ ಕೂಡ ಸಾಗರದಂತೆ ಅಭಿಮಾನಿಗಳ ದಂಡು ಹರಿದುಬರುತ್ತಿದೆ.
ರಾಜ್ಯದ ಮೂಲೆಮೂಲೆಗಳಿಂದ ಸಹಸ್ರಾರು ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಧಾವಿಸಿಬಂದು ನೆಚ್ಚಿನ ನಟನ ಅಂತಿಮ ದರ್ಶನ ಪಡೆದಿದ್ದಾರೆ. ನಿನ್ನೆ ಸಂಜೆಯಿಂದಲೇ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತತ 26 ಗಂಟೆ ಕಳೆದರೂ ಪುನೀತ್ ಅಂತಿಮ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ನಾಳೆ ಬೆಳಗ್ಗೆ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.