
ಬೆಂಗಳೂರು: ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರವ ಸ್ಟೇಡಿಯಂನಿಂದ ಪುನೀತ್ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದ್ದು, ಕಂಠೀರವ ಸ್ಟುಡಿಯೋ ತಲುಪಿದೆ.
ಕೆಲವೇ ಹೊತ್ತಿನಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ. ರಾಜಕುಮಾರ್ ಕುಟುಂಬದವರು ಬಂಧುಗಳು ಮತ್ತು ಗಣ್ಯರು ಭಾಗಿಯಾಗಿದ್ದಾರೆ. ಪಾರ್ಥಿವ ಶರೀರ ಕಂಠೀರವ ಸ್ಟುಡಿಯೋ ತಲುಪಿದ್ದು ಕೆಲವೇ ಕ್ಷಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.