alex Certify ಪವರ್ ಸ್ಟಾರ್ ಪುನೀತ್ ನಿಧನ ಹಿನ್ನೆಲೆ: ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ನಿಧನ ಹಿನ್ನೆಲೆ: ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿ

ಚಿಕ್ಕಬಳ್ಳಾಪುರ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಿಮ್ ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಹೃದಯ ತಜ್ಞರಿಂದ ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಗಳಲ್ಲಿ ಮಾರ್ಗಸೂಚಿ ತರುವ ಕುರಿತು ಚರ್ಚೆ ನಡೆದಿದ್ದು, ಶೀಘ್ರವೇ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಒಂದೆರಡು ಘಟನೆಗಳನ್ನು ಆಧರಿಸಿ ಜಿಮ್ ಮಾಡುವುದೇ ತಪ್ಪು ಎಂದು ಹೇಳುವುದು ಸರಿಯಲ್ಲ. ಹೀಗಾಗಿ ಮಾರ್ಗಸೂಚಿ ತರಲು ಚಿಂತನೆ ನಡೆದಿದೆ. ಖ್ಯಾತ ಹೃದಯ ತಜ್ಞರಾದ ಡಾ.ಸಿ.ಎನ್. ಮಂಜುನಾಥ್, ಡಾ. ವಿವೇಕ್ ಚೌಳಿ, ಡಾ. ದೇವಿಶೆಟ್ಟಿ, ಅಮೆರಿಕದ ರಂಗಧಾಮ್ ಅವರ ಬಳಿ ಚರ್ಚೆ ನಡೆಸಲಾಗಿದ್ದು, ಶೀಘ್ರವೇ ಮಾರ್ಗಸೂಚಿ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...