ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂಬ ಬೇಡಿಕೆ ಅಭಿಮಾನಿಗಳಿಂದ ಕೇಳಿ ಬರುತ್ತಿದೆ.
ಒತ್ತಡ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಗೆ ‘ಕರ್ನಾಟಕ ರತ್ನ’ ಗೌರವ ನೀಡುವ ಕುರಿತಂತೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಪ್ರಮುಖರೊಂದಿಗೆ ಚರ್ಚೆ ನಡೆಸಲಾಗುವುದು. ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.