ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇನ ನೀಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ಆದಾಯ 2 ಲಕ್ಷ ರೂ. ಮೀರಿರಬಾರದು. ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 1500 ರೂ. ರಂತೆ 6 ತಿಂಗಳು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯಾ ವರ್ಷದಲ್ಲಿ ಲಭ್ಯವಿರುವ ಅನುದಾನಕ್ಕೆ ಸೀಮಿತಗೊಳಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್ಸೈಟ್ https://dom.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ತಾಲೂಕು ಮಾಹಿತಿ ಕೇಂದ್ರಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಪಾಸ್ಬುಕ್ ಪ್ರತಿಯನ್ನು ಲಗತ್ತಿಸಿ ದಿ: 30/11/2021 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಜಿಲ್ಲಾ ಪಂಚಾಯತ್ ಕಟ್ಟಡ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206ನ್ನು ಸಂಪರ್ಕಿಸುವುದು.