alex Certify ಇಂದಿನಿಂದ ಸಾರ್ವಜನಿಕರಿಗೆ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಸಾರ್ವಜನಿಕರಿಗೆ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಮಾಧಿ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು RAF ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಸಮಾಧಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ

ಡಾ. ರಾಜಕುಮಾರ್ ಕುಟುಂಬದವರು ಹಾಲು ತುಪ್ಪ ಕಾರ್ಯ ನೆರವೇರಿಸದ ಕಾರಣ ಅಭಿಮಾನಿಗಳಿಗೆ ಪ್ರವೇಶ ಇರಲಿಲ್ಲ. ನಿನ್ನೆ ಹಾಲುತುಪ್ಪ ಕಾರ್ಯ ನೆರವೇರಿದ ನಂತರ ಬೆಳಗ್ಗೆಯಿಂದ ಕಾಯುತ್ತಿದ್ದ ಕೆಲವು ಅಭಿಮಾನಿಗಳಿಗೆ ಸಮಾಧಿ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇಂದಿನಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...