
ನವದೆಹಲಿ: ಕೋರೋನಾ ಲಾಕ್ ಡೌನ್ ನಂತರ ವರ್ಕ್ ಫ್ರಮ್ ಹೋಮ್ ಆದ್ಯತೆ ಪಡೆದುಕೊಂಡಿದೆ. ಬಹುತೇಕ ಕಂಪನಿಗಳು ಲಾಕ್ ಡೌನ್ ಸಂದರ್ಭದಲ್ಲಿ ವರ್ಕ್ ಫ್ರಂ ಹೋಮ್ ಗೆ ಆದ್ಯತೆ ನೀಡಿದ್ದು, ಉದ್ಯೋಗಿಗಳು ಕೂಡ ಇದಕ್ಕೆ ಹೊಂದಿಕೊಂಡಿದ್ದಾರೆ. ಕೊರೋನಾ ಕಡಿಮೆಯಾಗಿ ಲಾಕ್ ಡೌನ್ ಸಡಿಲಿಕೆಯಾದ ನಂತರ ವರ್ಕ್ ಫ್ರಂ ಹೋಮ್ ನಲ್ಲಿದ್ದ ಉದ್ಯೋಗಿಗಳು ಕಂಪನಿಯತ್ತ ಮುಖಮಾಡಿದ್ದಾರೆ.
ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಜಾಸ್ತಿಯಾಗಿರುವುದರಿಂದ ವರ್ಕ್ ಫ್ರಮ್ ಹೋಮ್ ಗೆ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ದೆಹಲಿಯಲ್ಲಿ ನಿನ್ನೆ ಕೇಂದ್ರ ಸಚಿವರನ್ನು ಭೇಟಿಯಾಗಿದ್ದ ರಾಜ್ಯ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾದರಿಯಲ್ಲಿ ಹಲವು ಯೋಜನೆ ತರಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಸ್ಟಾರ್ಟಪ್ ಗಳಿಗೆ ಸಾಲ ನೀಡಲು ಹೊಸ ಯೋಜನೆ ಜಾರಿಗೆ ತರಲಾಗುವುದು. ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದು, ಆರಂಭದಲ್ಲಿ ಬಂಡವಾಳ ಹೂಡಿಕೆಗೆ ಸರ್ಕಾರದ ಸಹಾಯ ನೀಡಲಾಗುವುದು ಎಂದು ಹೇಳಿದ್ದಾರೆ.