ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ದರವನ್ನು ಪ್ರತಿ ಲೀಟರಿಗೆ 12 ರೂಪಾಯಿ ಕಡಿಮೆ ಮಾಡಲಾಗಿದೆ. ಡೀಸೆಲ್ ದರ 17 ರೂ. ಇಳಿಕೆಯಾಗಿದೆ
ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ.
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 7 ರೂ. ವ್ಯಾಟ್ ಕಡಿತಗೊಳಿಸಿದೆ. ಇದರಿಂದಾಗಿ ಪೆಟ್ರೋಲ್ 12 ರೂ., ಡೀಸೆಲ್ 17 ರೂ.ನಷ್ಟು ಕಡಿಮೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ ಬರೆದು ಜನಸಾಮಾನ್ಯರಿಗೆ ಭಾರೀ ಹೊರೆಯಾಗಿತ್ತು. ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಬಕಾರಿ ಸುಂಕ ಮತ್ತು ವ್ಯಾಟ್ ಕಡಿತಗೊಳಿಸಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100 ರೂ. ಆಸುಪಾಸಿಗೆ ಬಂದಿದೆ.