ಹುಬ್ಬಳ್ಳಿ: ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯುಂಟಾಗಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹೈಕಮಾಂಡ್ ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ಸಂಪುಟ ವಿಸ್ತರಣೆಯೂ ಸಧ್ಯಕ್ಕಿಲ್ಲ ಎಂದು ತಿಳಿಸಿದರು.
ಕೋವ್ಯಾಕ್ಸಿನ್ ಲಸಿಕೆ ಅವಧಿ 1 ವರ್ಷಗಳಿಗೆ ವಿಸ್ತರಣೆ
ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದ್ದು, ಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.