ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೀಪ ಬೆಳಗುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ.
ದೆಹಲಿಯ ಎನ್ ಡಿ ಎಂ ಸಿ ಸಭಾಂಗಣದಲ್ಲಿ ಕಾರ್ಯಕಾರಿಣಿ ಆರಂಭವಾಗಿದ್ದು 5 ಗಂಟೆಗಳ ಕಾಲ ಸಭೆ ನಡೆಯಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 124 ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಕೇಂದ್ರ ಸಚಿವರು ಭೌತಿಕವಾಗಿ ಭಾಗಿಯಾಗಿದ್ದಾರೆ.
‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್
ಉಳಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಅಶ್ವತ್ಥ ನಾರಾಯಣ, ಕೆ.ಎಸ್. ಈಶ್ವರಪ್ಪ ಸೇರಿದಂತೆ ರಾಜ್ಯದ ಸಚಿವರು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ, ಕೋವಿಡ್ ಸಂದರ್ಭದಲ್ಲಿ ಎದುರಿಸಿದ ಬಿಕ್ಕಟ್ಟು, ನಿರ್ವಹಣಾ ಕ್ರಮಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸುವ ಸಾಧ್ಯತೆ ಇದೆ.