ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ರಾಯಲಸೀಮಾ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆಗಳಲ್ಲಿ ತಡ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಚೆನ್ನೈನ ಬಹುತೇಕ ಅಂಡರ್ ಪಾಸ್ ಗಳು ಮುಳುಗಡೆಯಾಗಿದ್ದು, 2015ರಲ್ಲಿ ಸಂಭವಿಸಿದ್ದ ಪ್ರವಾಹದ ಭೀಕರತೆಯನ್ನು ನೆನಪಿಸುವಂತಾಗಿದೆ.
BIG NEWS: ವಿಶ್ವದ ಘಟಾನುಘಟಿಗಳನ್ನೆಲ್ಲಾ ಹಿಂದಿಕ್ಕಿದ ಮೋದಿ ಜನ ಮೆಚ್ಚುಗೆಯ ಅಗ್ರ ನಾಯಕ
ಕಾಂಚಿವರಂ, ಚೆಂಗಲ್ಪಟ್ಟು, ತಿರುವಳ್ಳೂರು, ಸೈದಾಪೇಟ್, ವೆಲ್ಲಚೆರಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕುಂಭದ್ರೋಣ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ವಿದ್ಯುತ್ ಸಂಪರ್ಕಗಳು ಸಂಪೂರ್ಣ ಕಡಿತಗೊಂಡಿವೆ. ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜನರು ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದೇ ವೇಳೆ ಆಂಧ್ರಪ್ರದೇಶದ ನಲ್ಲೂರಿನಲ್ಲೂ ಭಾರಿ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.