ಬೆಂಗಳೂರು: 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಳ ಮಾಡಲು ಸಾಧ್ಯವಿಲ್ಲವೆಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಒಕ್ಕೂಟಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಮೆಡಿಕಲ್ ಕಾಲೇಜುಗಳ ಒಕ್ಕೂಟ ಬೇಡಿಕೆ ಇಟ್ಟಿತ್ತು. ಆದರೆ, ಸರ್ಕಾರದ ನಿಲುವನ್ನು ತಿಳಿಸಲಾಗಿದ್ದು, ಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲವೆಂದು ಹೇಳಲಾಗಿದೆ. ಕೋವಿಡ್ ಆರ್ಥಿಕ ಸಂಕಷ್ಟದ ನಡುವೆ ಕಳೆದ ವರ್ಷ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಈ ವರ್ಷ ಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.