ಚಿಕ್ಕಬಳ್ಳಾಪುರ: ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮದಲ್ಲಿ ಬೆಳಗಿನ ಜಾವ 4 ಗಂಟೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಹನುಮಂತರಾಯಪ್ಪ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿ ಕೂಡ ಭೂಮಿ ಕಂಪಿಸಿದ ಅನುಭವವಾಗಿತ್ತು. ಭಾರಿ ಸ್ಫೋಟದ ಸದ್ದು ಕೇಳಿಬಂದು ಭೂಮಿ ಕಂಪಿಸಿದ ಅನುಭವವಾಗಿತ್ತು. ಜನ ಭಯದಿಂದ ಮನೆಯಿಂದ ಹೊರಗೆ ಓಡಿಬಂದು ತಮಗಾದ ಅನುಭವ ಹೇಳಿಕೊಂಡಿದ್ದಾರೆ. ಬೆಳಗಿನಜಾವ ಮತ್ತೆ ಭೂಮಿ ಕಂಪಿಸಿದ್ದರಿಂದ ಮಿಟ್ಟಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನ ಆತಂಕಗೊಂಡಿದ್ದಾರೆ.