ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ನವದೆಹಲಿಯ ಪ್ರಧಾನಿ ನಿವಾಸದಲ್ಲಿ ಭೇಟಿಗೆ ಸಮಯ ನಿಗದಿಯಾಗಿದೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿಯವರ ನಿವಾಸದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಮತ್ತು ರಾಜ್ಯಕ್ಕೆ ಕೇಂದ್ರದ ನೆರವಿನ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 100 ದಿನ ಪೂರೈಸಿದ್ದಾರೆ. ಉಪ ಚುನಾವಣೆ ಫಲಿತಾಂಶವೂ ಬಂದಿದೆ. 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಪ್ರಧಾನಿಯವರನ್ನು ಭೇಟಿಯಾಗುತ್ತಿದ್ದು, ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.