ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿ(JKSSB) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 800 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮಂಡಳಿಯು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ನ UT ಕೇಡರ್ ಹುದ್ದೆಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಅಧಿಕೃತ ವೆಬ್ಸೈಟ್ jkssb.nic.in ಗಮನಿಸಬಹುದಾಗಿದೆ.
ಒಟ್ಟು 800 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10, 2021. ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.
ಪೋಸ್ಟ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮುಂದಿನ ಹಂತದ ಆಯ್ಕೆಗೆ ಹಾಜರಾಗಲು ಅರ್ಹರಾಗಲು ಮೇಲಿನ ಎಲ್ಲಾ ಪರೀಕ್ಷೆಗಳಿಗೆ ಅರ್ಹತೆ ಪಡೆಯಬೇಕು. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಒಟ್ಟು 550 ರೂಪಾಯಿ ಪಾವತಿಸಬೇಕು, SC, ST ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 400 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ಗಳ ಮೂಲಕ ಪಾವತಿಸಬಹುದು.