alex Certify ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್

ಕೊಪ್ಪಳ: ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರ ಹೋಗಲಿದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಹೊಸ ಬಾಂಬ್ ಸಿಡಿಸಿದ ಶಿವರಾಜ್ ತಂಗಡಗಿ, ಇನ್ನೂ ಒಂದೂವರೆ ವರ್ಷದಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ. ರಾಜ್ಯಕ್ಕೆ ಇನ್ನೂ ಇಬ್ಬರು ಮುಖ್ಯಮಂತ್ರಿಗಳು ಬರುತ್ತಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರು ಸತ್ಯ. ಬೊಮ್ಮಾಯಿ ಅವರನ್ನು ಬಿಟ್ಟು ಇನ್ನೊಬ್ಬರು ಮುಖ್ಯಮಂತ್ರಿಯಾಗುತ್ತಾರೆ. ಅವರಿಗೆ ಸಿಂಗಲ್ ಆಗಿ ಆಡಳಿತ ಮಾಡಲು ಆಗುವುದಿಲ್ಲ. ಬಿಜೆಪಿ ಈ ಹಿಂದೆ ಮೂವರನ್ನು ಮುಖ್ಯಮಂತ್ರಿ ಮಾಡಿದ್ದು, ಈ ಬಾರಿ ನಾಲ್ವರು ಮುಖ್ಯಮಂತ್ರಿ ಆಗಬಹುದು. ಆದರೆ, ಅವರು ಆಡಳಿತ ಮಾಡಲು ಸಮರ್ಥರಿಲ್ಲ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಲಿದ್ದಾರೆ. ದೂರು ದಾಖಲಿನ ಪ್ರತಿ ಕೊಡಿ ಎಂದು ನಾಯಕರು ಕೇಳುತ್ತಿದ್ದಾರೆ. ಅದರ ಬಗ್ಗೆ ಹೆದರಿಕೆ ಇರೋದಕ್ಕೆ ಬಿಜೆಪಿಯವರು ಕೊಡುತ್ತಿಲ್ಲ. ಆರೋಪಿಸುವವರು ಸಾಕ್ಷ್ಯ ಕೊಡಬೇಕು ಎಂದರೆ ಸರ್ಕಾರ ಇರುವುದು ಏಕೆ ಎಂದು ತಂಗಡಗಿ ಅವರು ಪ್ರಶ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...