ನವದೆಹಲಿ: ಒನಕೆ ಓಬವ್ವ ಜಯಂತಿ ಅಂಗವಾಗಿ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದು, ವೀರವನಿತೆಯನ್ನು ಸ್ಮರಿಸಿದ್ದಾರೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇವತ್ತು ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಕಾರಣ ಮುಂದೂಡಲಾಗಿದೆ.