alex Certify BIG BREAKING: ಬಿಟ್ ಕಾಯಿನ್ ಬಿರುಗಾಳಿ; ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಟ್ ಕಾಯಿನ್ ಬಿರುಗಾಳಿ; ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ನಡುವೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಬಿಟ್ ಕಾಯಿನ್ ಚರ್ಚೆ, ಉಪಚುನಾವಣೆ ಫಲಿತಾಂಶ, ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನ, ಸಿಎಂ ಆಗಿ ನೂರು ದಿನಗಳ ಆಡಳಿತ ಕುರಿತಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಧಾನಿ ಮೋದಿ ಭೇಟಿಗೂ ಮುನ್ನ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ಈ ವೇಳೆ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಕಾಂಗ್ರೆಸ್ ನಿಂದ ಬಿಜೆಪಿ ನಾಯಕರ ವಿರುದ್ಧ ಆರೋಪ, ಉಪಚುನಾವಣೆಯಲ್ಲಿ ತವರು ಕ್ಷೇತ್ರ ಹಾನಗಲ್ ನಲ್ಲಿ ಸೋಲು, ರಾಜ್ಯ ಸಚಿವ ಸಪುಟ ವಿಸ್ತರಣೆ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...