ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವವರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅರ್ಜಿ ಸಲ್ಲಿಸುವ ವೇಳೆ ‘ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ’ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಿದೆ.
ರಾಯಚೂರಿನ ಮುದುಗಲ್ ನಿವಾಸಿ ಬಸವರಾಜ್ ಎಂಬವರು, ಕೃಷ್ಣ ಜಲಭಾಗ್ಯ ನಿಗಮದಿಂದ ಕರೆಯಲಾಗಿದ್ದ ಅಲ್ಪಾವಧಿ ಟೆಂಡರ್ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ವಿಷಯ ತಿಳಿಸಿದೆ.
ಬಸವರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ‘ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ’ ಪಾಲನೆಯಾಗಿಲ್ಲವೆಂದು ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಇಲ್ಲವಾದರೆ ಅಂತಹ ಅರ್ಜಿಗಳನ್ನು ಮಾನ್ಯ ಮಾಡಬಾರದೆಂದು ನಿರ್ದೇಶಿಸಿದೆ.