ಹಾಸನ: ವಿಧಾನಪರಿಷತ್ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪಕ್ಷದ ನಾಯಕರ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು, ಎಲ್ಲರ ಅಭಿಪ್ರಾಯ ಪಡೆದುಕೊಂಡು ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸೋಣ ಎಂದು ಹೇಳಿದ್ದಾರೆ.
ಕೆಲವರು ಭವಾನಿ ರೇವಣ್ಣ ಮತ್ತು ಸೂರಜ್ ರೇವಣ್ಣ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಅಂತಿಮವಾಗಿ ಕೆಟ್ಟ ಹೆಸರು ಬರಬಾರದು. ಪಕ್ಷಕ್ಕೆ ಕೆಲಸ ಮಾಡಿದ ಕಾರ್ಯಕರ್ತರು ಬಹಳ ಜನರಿದ್ದಾರೆ. ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಯಾರು ಹೇಳಬಾರದು. ಇದುವರೆಗೆ ನಮ್ಮ ಕುಟುಂಬದಲ್ಲಿ ಯಾರೂ ವಿಧಾನಪರಿಷತ್ ಸದಸ್ಯರಾಗಿಲ್ಲ. ಕೆಲವು ಸಮಾಜದವರನ್ನು ನಾವು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದೇವೆ. ನಾನು ಸಾಕಷ್ಟು ಮಾತನಾಡುವುದು ಇದೆ ಎಂದು ದೇವೇಗೌಡರು ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಭವಾನಿ ರೇವಣ್ಣ ಅಥವಾ ಸೂರಜ್ ರೇವಣ್ಣ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಸಭೆ ನಡೆಸಲಾಗಿದೆ ಎಂದು ಹೇಳಲಾಗಿದೆ.