ಬಿಟ್ ಕಾಯಿನ್ ವಿಚಾರವಾಗಿ ಸಚಿವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹೆಚ್.ಎಂ. ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕೋ? ಅಥವಾ ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಎಂದು ಪ್ರಶ್ನಿಸಿದ್ದಾರೆ. ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ? ನಾಳೆ ಗೃಹಸಚಿವರು ಬಂದು ರಾಜ್ಯದ ಕೊರೋನಾ ಲಸಿಕೆ ಮಾಹಿತಿ ನೀಡುತ್ತಾರೆಯೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬಿಟ್ ಕಾಯಿನ್ ವಿಚಾರವಾಗಿ ಕಾಂಗ್ರೆಸ್ ಮಾಡಿದ್ದ ಆರೋಪಗಳಿಗೆ ಸಚಿವ ಸುಧಾಕರ್ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಪ್ರತ್ಯುತ್ತರ ನೀಡಿದ್ದರು. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.