ತುಮಕೂರು: ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ದಲಿತ ಸಿಎಂ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ನೀವು ಏನಾಗಬೇಕು ಎಂದು ಕೇಳಿದ ತಕ್ಷಣ ನಾನು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ.
ನನಗೆ ಮಂತ್ರಿಯಾಗುವ ಆಸೆ ಇಲ್ಲ. ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದೆ. ನಾನು ಮುಖ್ಯಮಂತ್ರಿಯಾಗಬಹುದು ಅಥವಾ ಆಗದೇ ಇರಬಹುದು. ಈ ಮಾತಿನಿಂದ ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅದೃಷ್ಟ ಯಾರಿಗೆ ಬರುತ್ತೆ ನೋಡೋಣ. ದಲಿತರು ಒಗ್ಗಟ್ಟಾಗಿ ಹೋರಾಡಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ.