alex Certify ಪ್ರಿಯಾಂಕ್ ಖರ್ಗೆಗೆ ಸಚಿವ ಸುಧಾಕರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಾಂಕ್ ಖರ್ಗೆಗೆ ಸಚಿವ ಸುಧಾಕರ್ ತಿರುಗೇಟು

ಪ್ರಿಯಾಂಕ್ ಖರ್ಗೆ ಅವರ ಸಾಂದರ್ಭಿಕ ಮರೆವು, ಜಾಣಕುರುಡು, ಕೀಳು ರಾಜಕೀಯದ ಆಲೋಚನೆ ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಳಿ, ಮಳೆ ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲಿ ವಿಹರಿಸಲಿ. ಆದರೆ, ಸಂಪುಟ ಸಚಿವರಿಗೆ ಸರ್ಕಾರದ ಪರವಾಗಿ ಮಾತನಾಡುವ ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಮುಖಂಡರ ಹತಾಶೆ. ಜನರನ್ನು ಹೇಗಾದರೂ ಮಾಡಿ ದಾರಿ ತಪ್ಪಿಸಬೇಕೆಂದು ಆತುರದ ಪ್ರದರ್ಶನವಲ್ಲದೆ ಇನ್ನೇನು? ಕೀಳು ರಾಜಕೀಯ ಕಾಂಗ್ರೆಸ್ ಪಕ್ಷಕ್ಕೆ ಸರಿ. ಪ್ರಿಯಾಂಕ್ ಖರ್ಗೆ ಐಟಿ ಸಚಿವರಾಗಿದ್ದಾಗ ನಂತರ ಸಮಾಜಕಲ್ಯಾಣ ಸಚಿವರಾಗಿದ್ದಾಗ ಕೇವಲ ಅವರ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದಾರೆ ಎಂದು ಒಮ್ಮೆ ನೆನಪು ಮಾಡಿಕೊಳ್ಳಲಿ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಪಪ್ರಚಾರ ಸುಳ್ಳಿನ ರಾಜಕಾರಣವನ್ನು ಬಿಜೆಪಿ ಸಹಿಸುವುದಿಲ್ಲ. ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಬೇಕು. ಸಚಿವರು ಮಾತ್ರವಲ್ಲ, ಪ್ರತಿಯೊಬ್ಬ ಕಾರ್ಯಕರ್ತ ಕೂಡ ಕಾಂಗ್ರೆಸ್ ಪಕ್ಷದ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ.

ಬಿಟ್ ಕಾಯಿನ್ ವಿಚಾರವಾಗಿ ಸಚಿವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ, ಹೆಚ್.ಎಂ. ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕೋ? ಅಥವಾ ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ? ನಾಳೆ ಗೃಹಸಚಿವರು ಬಂದು ರಾಜ್ಯದ ಕೊರೋನಾ ಲಸಿಕೆ ಮಾಹಿತಿ ನೀಡುತ್ತಾರೆಯೇ? ಎಂದು ಪ್ರಶ್ನಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...