ಮಂಡ್ಯ: ಗೋಡೆ ಕುಸಿದು ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕ ಮೃತಪಟ್ಟ ಘಟನೆ ಕೆನ್ನಾಳು ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ 10 ವರ್ಷದ ಗಗನ್ ಸಾವನ್ನಪ್ಪಿದ್ದಾನೆ.
ನಿನ್ನೆ ರಾತ್ರಿಯಿಂದ ಸುರಿದು ತೇವಗೊಂಡಿದ್ದ ಜವರೇಗೌಡ ಎಂಬವರಿಗೆ ಸೇರಿದ ಮನೆ ಗೋಡೆ ಕುಸಿದಿದೆ. ಮನೆ ಬಳಿ ಆಟವಾಡುತ್ತಿದ್ದ ಗಗನ್ ಮೇಲೆ ಗೋಡೆ ಬಿದ್ದಿದೆ. ಆತನನ್ನು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಗೋಡೆ ಕುಸಿದು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಕೂಡ ಮೃತಪಟ್ಟಿವೆ ಎನ್ನಲಾಗಿದೆ.