ಬೆಂಗಳೂರು: ಸುಖಾಸುಮ್ಮನೆ ಆರೋಪ ಮಾಡಿಲ್ಲ. ಬಿಟ್ ಕಾಯಿನ್ ಕೇಸಿನ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ಬಿಟ್ ಕಾಯಿನ್ ವಿಚಾರದಲ್ಲಿ ನಾವು ಸುಮ್ಮನೆ ಮಾತನಾಡುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಬೇಕಿರುವ ಮಾಹಿತಿಗಳನ್ನು ಹೇಳಿದ್ದೇವೆ. ಶೀಘ್ರವೇ ದಾಖಲೆಗಳನ್ನು ಕೂಡ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.