ಕೋಲಾರ: ಬಿಟ್ ಕಾಯಿನ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕೋಲಾರದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೈಕೋರ್ಟ್ ನ್ಯಾಯಮೂರ್ತಿ ಸಮ್ಮುಖದಲ್ಲಿ ತನಿಖೆ ನಡೆಸಲಿ. ಕಾಂಗ್ರೆಸ್ ನವರ ಪಾತ್ರವಿದ್ದರೆ ಬಂಧಿಸಿ ವಿಚಾರಣೆ ನಡೆಸಲಿ. ಬಿಟ್ ಕಾಯಿನ್ ಹಗರಣದಲ್ಲಿ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಹೇಳಿದ್ದಾರೆ.