alex Certify ಬರೋಬ್ಬರಿ 22 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿ ಮಾಲ್ ಗೆ ಬಿಗ್ ಶಾಕ್: ಬಿಬಿಎಂಪಿ ಅಧಿಕಾರಿಗಳಿಂದ ಬೀಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರೋಬ್ಬರಿ 22 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿ ಮಾಲ್ ಗೆ ಬಿಗ್ ಶಾಕ್: ಬಿಬಿಎಂಪಿ ಅಧಿಕಾರಿಗಳಿಂದ ಬೀಗ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಮಂತ್ರಿಮಾಲ್ ಗೆ ಮತ್ತೆ ಬೀಗ ಹಾಕಿದ್ದಾರೆ. ಬರೋಬ್ಬರಿ 22 ಕೋಟಿ ರೂಪಾಯಿ ಬಾಕಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದೆ.

ಕಳೆದ ಬಾರಿ ಬೀಗ ಹಾಕಿದ್ದ ಸಂದರ್ಭದಲ್ಲಿ 5 ಕೋಟಿ ರೂಪಾಯಿ ಬಾಕಿ ತೆರಿಗೆಯನ್ನು ಪಾವತಿಸಲಾಗಿತ್ತು. ಬಾಕಿ ತೆರಿಗೆ ಪಾವತಿಸಲು ಆಡಳಿತ ಮಂಡಳಿ ಬಿಬಿಎಂಪಿಗೆ ಸಮಯ ಕೇಳಿದ್ದು, ನೀಡಲಾಗಿದ್ದ ಸಮಯ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿದೆ.

ಮಂತ್ರಿ ಮಾಲ್ ಗೆ ತೆರಿಗೆ ಪಾವತಿಸಲು ಬಿಬಿಎಂಪಿ 15 ದಿನ ಕಾಲಾವಕಾಶ ನೀಡಿದೆ. ಇಂದು ಬೀಗ ಹಾಕಿದ್ದ ಅಧಿಕಾರಿಗಳಿಗೆ 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರು ಮನವಿ ಮಾಡಿದ ಹಿನ್ನೆಲೆಯಲ್ಲಿ 15 ದಿನ ಕಾಲಾವಕಾಶ ನೀಡಿದ್ದಾರೆ. ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿ ಮಾಲ್ ಮಾಲೀಕರು 15 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದು, ಈ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...