ಮರಣೋತ್ತರ ಪರೀಕ್ಷೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಸೂರ್ಯ ಮುಳುಗಿದ ಬಳಿಕವೂ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೋಮವಾರದಂದು ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ.
ಆದರೆ ಇದನ್ನು ಅನುಷ್ಠಾನಗೊಳಿಸುವ ಕುರಿತಂತೆ ಕೆಲವೊಂದು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ಬೇಕಾದ ಬೆಳಕಿನ ಸೌಲಭ್ಯ ಸೇರಿದಂತೆ ಸಕಲ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ಸೂರ್ಯ ಮುಳುಗಿದ ನಂತರವೂ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ತಿಳಿಸಲಾಗಿದೆ.
ಪಿಯುಸಿ ವಾರ್ಷಿಕ ಪರೀಕ್ಷೆ ರೀತಿಯಲ್ಲೇ ನ. 29 ರಿಂದ ಅರ್ಧ ವಾರ್ಷಿಕ ಪರೀಕ್ಷೆ, ಪುನರ್ ಪರಿಶೀಲನೆಗೆ ಉಪನ್ಯಾಸಕರ ಮನವಿ
ಆದರೆ ಆತ್ಮಹತ್ಯೆ, ಹತ್ಯೆ, ಅತ್ಯಾಚಾರ, ಕೊಳೆತ ದೇಹಗಳು ಮತ್ತು ಶಂಕಿತ ಸಾವು ಪ್ರಕರಣಗಳಲ್ಲಿ ಮಾತ್ರ ಈ ಮೊದಲಿನಂತೆ ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದ್ದು, ಇಂತಹ ಪ್ರಕರಣಗಳಲ್ಲಿ ರಾತ್ರಿ ವೇಳೆ ಮರಣೋತ್ತರ ಪರೀಕ್ಷೆ ನಡೆಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.