ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 8,865 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 287 ದಿನಗಳಲ್ಲಿ ಪತ್ತೆಯಾದ ಅತಿ ಕಡಿಮೆ ಕೋವಿಡ್ ಪ್ರಕರಣಗಳಾಗಿವೆ.
ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಒಂದೇ ದಿನದಲ್ಲಿ 197 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ463852 ಕ್ಕೆ ಏರಿಕೆಯಾಗಿದೆ.
ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್: ನ.18 ರೊಳಗೆ ಸ್ಥಗಿತಗೊಂಡಿದ್ದ ಎಲ್ಲ ರೈಲುಗಳ ಸಂಚಾರ ಆರಂಭ
ಇನ್ನು ದೇಶದಲ್ಲಿ 130793 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11971 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33861756 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್
ನಿನ್ನೆ ದೇಶದಲ್ಲಿ 11,07,617 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 59,75,469 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,12,97,84,045 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.