ಮೈಸೂರು: ಕೋವಿಡ್ 19 ಸೋಂಕಿನಿಂದ ಕುಟುಂಬದಲ್ಲಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಅರ್ಜಿಯೊಂದಿಗೆ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ವರದಿಗಳಾದ ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ ಕೋವಿಡ್ 19 ಪಾಸಿಟಿವ್ ವರದಿ, ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು ಅಂದರೆ ಕೋವಿಡ್ 19 ನೆಗೆಟಿವ್ ಇದ್ದು, ಕ್ಲಿನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯದ ವರದಿ.
ಮೃತ ಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರ, ಅರ್ಜಿದಾರರ ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ, ಅರ್ಜಿದಾರರು ಪರಿಹಾರ ಪಡೆಯುವಲ್ಲಿ ಕುಟುಂಬದ ಎಲ್ಲಾ ಸದಸ್ಯರನ್ನೊಳಗೊಂಡಂತೆ ನಿರಾಕ್ಷೇಪಣಾ ಪತ್ರವನ್ನು ತಾಲ್ಲೂಕು ಅಥವಾ ಜಿಲ್ಲಾ ವೈದ್ಯಾಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.