ಬೆಂಗಳೂರು: ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಅಶೋಕನಗರದಲ್ಲಿ ಕೊಲೆ ಆರೋಪಿ ಪಳನಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಪಳನಿಯನ್ನು ಬಂಧಿಸಲಾಗಿದೆ.
ನವೆಂಬರ್ 10ರಂದು ಮುನ್ನಾಕುಮಾರ್ ಎಂಬುವರ ಕೊಲೆ ಮಾಡಿದ್ದ ಪಳನಿ ಸುಮಾರು 20 ಪ್ರಕರಣಗಳಲ್ಲಿ ಬೇಕಾಗಿದ್ದ. ಆತನನ್ನು ಬಂಧಿಸಲು ಬೆಳ್ಳಂದೂರು ಪೊಲೀಸರು ಮತ್ತು ಸಿಸಿಬಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು. ಆತನಿಗಾಗಿ ಶೋಧ ಕೈಗೊಂಡಿದ್ದು ಅಶೋಕನಗರದ ಸ್ಮಶಾನದ ಬಳಿ ಇರುವ ಬಗ್ಗೆ ಮಾಹಿತಿ ಬಂದಿದೆ.
ಈ ವೇಳೆ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿದ ಪಳನಿ ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಆಗ ಎಡಗಾಲಿಗೆ ಶೂಟ್ ಮಾಡಿ ರೌಡಿ ಪಳನಿಯನ್ನು ಬಂಧಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.