ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕಟ್ಟೆಚ್ಚರ ಘೋಷಿಸಲಾಗಿದೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಪುದುಚೆರಿಯಲ್ಲಿಯೂ ಕೂಡ ಇಂದು ಮಳೆಯಾಗಲಿದ್ದು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತನ್ನ ಮಕ್ಕಳನ್ನೇ ಮಾರಾಟ ಮಾಡಲು ಮುಂದಾದ ಪೇದೆ…! ಇದರ ಹಿಂದಿದೆ ಮನಕಲಕುವ ಕಥೆ
ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ನಗರ ಜಲಾವೃತಗೊಂಡಿದ್ದು, ಜನಜೀವನ ಅಸ್ಥವ್ಯವಸ್ಥಗೊಂಡಿದೆ. ಈ ನಡುವೆ ಇಂದೂ ಕೂಡ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಪುದುಚೆರಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.