ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಅವರನ್ನು ಆಯ್ಕೆಮಾಡಲಾಗಿದೆ. ಹಾಸನ ಸ್ಥಳೀಯ ಸಂಸ್ಥೆಗಳ ಪ್ರಾತಿನಿಧಿಕ ಕ್ಷೇತ್ರದಿಂದ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲೆಯ ಜೆಡಿಎಸ್ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಸೂರಜ್ ರೇವಣ್ಣ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ಸೂರಜ್ ರೇವಣ್ಣ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಅಧಿಕೃತವಾಗಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಂದೆ ಹೆಚ್.ಡಿ. ರೇವಣ್ಣ ಮತ್ತು ಸಹೋದರ ಪ್ರಜ್ವಲ್ ರೇವಣ್ಣ ಅವರ ಚುನಾವಣೆಗಳಲ್ಲಿ ಸೂರಜ್ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದಾರೆ.
ಪ್ರಸ್ತುತ ಹೆಚ್.ಡಿ. ದೇವೇಗೌಡರು ರಾಜ್ಯಸಭೆ ಸದಸ್ಯರಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಲೋಕಸಭೆ ಸದಸ್ಯರಾಗಿದ್ದಾರೆ. ಭವಾನಿ ರೇವಣ್ಣ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಈಗ ಸೂರಜ್ ರೇವಣ್ಣ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.