ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನ. 19, 20 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.
ಶಾಲಾ, ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಜಿಲ್ಲೆಯ ಸ್ಥಿತಿ-ಗತಿ ನೋಡಿಕೊಂಡು ರಜೆ ನೀಡುವಂತೆ ಸೂಚನೆ ನೀಡಲಾಗಿದೆ. ಶಾಲೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚನೆ ನೀಡಲಾಗಿದೆ.
ಮಳೆಯ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಶಾಲೆಗಳಲ್ಲಿ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇವತ್ತು ಮತ್ತು ನಾಳೆ ಎರಡು ದಿನ ಜಿಲ್ಲಾಡಳಿತದಿಂದ ರಜೆ ಘೋಷಣೆ ಮಾಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿಯೂ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ. 19, 20 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ನೀಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 19, 20 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 19, 20 ರಂದು ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ ಎಂದು ಹೇಳಲಾಗಿದೆ.