ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಗೋಡೆ ಕುಸಿದು 24 ವರ್ಷದ ತ್ರಿವೇಣಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಚಳ್ಳಕೆರೆ ತಾಲೂಕಿನಲ್ಲಿ ದಂಪತಿಗಳಿಬ್ಬರು ಸಾವನ್ನಪ್ಪಿದ್ದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಯಾಜ್, ಹ್ಯುಂಡೈ ವೆರ್ನಾಗೆ ಟಕ್ಕರ್ ನೀಡಲಿದೆ ಈ ಕಾರು
ಕೋಲಾರ ಜಿಲ್ಲೆಯಾದ್ಯಂತ ಮಳೆ ಅಬ್ಬರಕ್ಕೆ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಕೆಂದಟ್ಟಿ ಗ್ರಾಮದಲ್ಲಿ ಮನೆ ಕುಸಿದುಬಿದ್ದ ಪರಿಣಾಮ 50 ವರ್ಷದ ಪ್ರಭಾಕರ ಎಂಬ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ.
ಒಟ್ಟಾರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಈವರೆಗೆ ಐವರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಮಳೆ ಹಾನಿ, ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ಜಿಲ್ಲಾಡಳಿತಗಳ ಸಭೆ ಕರೆದಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.