ನವದೆಹಲಿ: ಆದಾಯ ತೆರಿಗೆ ವ್ಯಾಪ್ತಿಗೆ ಕ್ರಿಪ್ಟೊಕರೆನ್ಸಿಗಳನ್ನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ.
ಕ್ರಿಪ್ಟೊಕರೆನ್ಸಿಗಳನ್ನು ಆದಾಯ ತೆರಿಗೆ ವ್ಯಾಪ್ತಿಗೆ ತರಲು ಆದಾಯ ತೆರಿಗೆ ಕಾಯ್ದೆಗೆ ಕೆಲವು ಬದಲಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಕೆಲವರು ಕ್ರಿಪ್ಟೊಕರೆನ್ಸಿ ಮೂಲಕ ಲಭಿಸಿದ ಆದಾಯಕ್ಕೆ ಕ್ಯಾಪಿಟಲ್ ಗೇನ್ಸ್ ತೆರಿಗೆ ಪಾವತಿಸುತ್ತಿದ್ದು, ಜಿಎಸ್ಟಿ ಅಡಿಯಲ್ಲಿ ಇತರೆ ಸೇವೆ ವ್ಯಾಪ್ತಿಯಡಿಯಲ್ಲಿ ತೆರಿಗೆ ಹಾಕಲು ಅವಕಾಶ ಇದೆ ಎಂದು ಕೇಂದ್ರ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.
ತೆರಿಗೆ ಕಾನೂನಿನಲ್ಲಿ ಕೆಲ ಬದಲಾವಣೆ ತರಲು ಚಿಂತನೆ ನಡೆದಿದೆ. ಈಗ ಕ್ರಿಪ್ಟೊಕರೆನ್ಸಿಗೆ ಸಂಬಂಧಿಸಿದಂತೆ ತೆರಿಗೆ ವಿಧಿಸಲು ಕಾಲ ಸನ್ನಿಹಿತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕ್ರಿಪ್ಟೊಕರೆನ್ಸಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಧೇಯಕವನ್ನು ಸರ್ಕಾರ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆ ಇದೆ.