ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,302 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಇನ್ನು ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 267 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 465349 ಕ್ಕೆ ಏರಿಕೆಯಾಗಿದೆ.
ಡಾರ್ಲಿಂಗ್ ಕೃಷ್ಣ ಅಭಿನಯದ ʼದಿಲ್ ಪಸಂದ್’ ಫಸ್ಟ್ ಲುಕ್ ರಿಲೀಸ್
ಇನ್ನು ದೇಶದಲ್ಲಿ 124868 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33909708 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 10,72,863 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 51,59,931 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,15,79,69,274 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.