ಬೆಳಗಾವಿ: ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಪ್ರಧಾನಿ ಮೋದಿ ವಿಶೇಷ ಒತ್ತು ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ವಿಪಕ್ಷಗಳು ಅನಗತ್ಯ ಟೀಕೆ ಮಾಡದೇ ರಚನಾತ್ಮಕ ಸಲಹೆ ನೀಡಲಿ ಎಂದರು.
ನೆರೆ ಬಂದಾಗ ಮನೆ ಕಳೆದುಕೊಂಡವರಿಗೆ 5 ಲಕ್ಷ, ಕಡಿಮೆ ಹಾನಿಗೊಳಗಾದವರಿಗೆ 50 ಸಾವಿರ ಪರಿಹಾರ ನೀಡಿದ್ದೇವೆ. ಈವರೆಗೂ ದೇಶದ ಯಾವುದೇ ಸರ್ಕಾರ ಇಂತಹ ಕೆಲಸ ಮಾಡಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರವಾಗಿ ನಾನು ನೀಡಿದ್ದ ಭರವಸೆಯನ್ನು ಈಡೇರಿಸುತ್ತೇನೆ. ಈ ಕುರಿತು ಶೀಘ್ರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.