ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಡಿಎ ಮೇಲೆ ದಾಳಿಗೆ ಸಂಬಂಧಿಸಿದಂತೆ ಎ.ಸಿ.ಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಮೈದುನನೊಂದಿಗೆ ಸಂಬಂಧ ಬೆಳೆಸಿದ ಮಹಿಳೆ ತಡರಾತ್ರಿ ಪತಿಗೇನು ಮಾಡಿದ್ದಾಳೆ ನೋಡಿ
ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಎಸ್.ಆರ್.ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದರು.
ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ದೊರಕಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛಗೊಳಿಸಬೇಕಿರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ದಾಳಿ ನಡೆದಿದೆ ಎಂದು ಹೇಳಿದರು.