ಮಳೆಯಿಂದ ಭಾರಿ ಹಾನಿಯಾಗಿದ್ದು, ಸಂತ್ರಸ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸಿಎಂ ಸೂಚನೆ ನೀಡಿದ್ದಾರೆ.
ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಕೂಡ ಪರಿಹಾರ ನೀಡಲಿದ್ದು, ಶೀಘ್ರವೇ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಬಾರಿ ಮಳೆಯಿಂದ ಅಪಾರ ಹಾನಿಯಾಗಿದೆ. ಈಗಾಗಲೇ ಸಚಿವರು ಜಿಲ್ಲೆಗಳಲ್ಲಿ ಇದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಇದೆ. ಅಧಿಕಾರಿಗಳ ಸಭೆ ನಡೆಸಲು ಅನುಮತಿ ಕೋರಲಾಗಿದೆ. ಚುನಾವಣಾ ಆಯೋಗದ ಅನುಮತಿ ಕೋರಲಾಗಿದ್ದು, ಚುನಾವಣಾ ಆಯೋಗ ಅನುಮತಿ ನೀಡಿದರೆ ಸಭೆ ನಡೆಸಲಾಗುವುದು ಎಂದರು.
ಚಿಕ್ಕಬಳ್ಳಾಪುರದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಪರಿಹಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ., ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ. ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಶೀಘ್ರವೇ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರದಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.