ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ 26 ರಿಂದ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗಿ ರೂಪುಗೊಳ್ಳಲಿದೆ. ಇದರಿಂದಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ ಮೊದಲಾದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ನವಂಬರ್ 26 ರಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಭಾರಿ ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಭಾರಿ ಹಾನಿಯಾಗಿದ್ದು, ಬೆಳೆ, ಮನೆ, ಜೀವ ಹಾನಿಯಾಗಿದ್ದು, ಮತ್ತೆ ಸೈಕ್ಲೋನ್ ನಿಂದ ಮಳೆಯಾಗುವ ಸೂಚನೆ ನೀಡಿರುವುದರಿಂದ ಆತಂಕ ಮೂಡಿದೆ.