ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವರು ಮನೆ ಮಠ ಕಳೆದುಕೊಂಡಿದ್ದು, ಬೆಳೆಗಳು ನೀರುಪಾಲಾಗಿವೆ. ರಸ್ತೆಗಳು ಸಂಪೂರ್ಣ ಹಾನಿಯಾಗಿವೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಭಾಗಶಃ ಮನೆ ಹಾನಿಯಾಗಿದ್ದರೆ ಅಂತವರಿಗೆ ಪರಿಹಾರ ಹಣ ನೀಡುವಂತೆ ಸೂಚಿಸಿದ್ದೇನೆ. ಬೆಳೆ ಸಮೀಕ್ಷೆ ಪರಿಹಾರ ಆಪ್ ನಲ್ಲಿ ಎಂಟ್ರಿಯಾಗಬೇಕು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಗ್ಗದ ಜಿಯೋಫೋನ್ ನೆಕ್ಸ್ಟ್ ಖರೀದಿಗೆ ತುದಿಗಾಲಿನಲ್ಲಿ ನಿಂತ ಜನ
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 689 ಕೋಟಿ ರೂ. ಇದೆ ಅಗತ್ಯವಿದ್ದರೆ ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದರು.
ರಾಜ್ಯದಲ್ಲಿ 658 ಮನೆಗಳು ನೆಲಸಮವಾಗಿದ್ದು, 8,495 ಮನೆಗಳು ಭಾಗಶಃ ಹಾನಿಯಾಗಿವೆ. 5 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿವೆ. 30,114 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ನಷ್ಟವಾಗಿದೆ. 191 ಜಾನುವಾರಗಳು ಸಾವನ್ನಪ್ಪಿವೆ. ಆಗಸ್ಟ್, ಸೆಪ್ಟೆಂಬರ್ ನಲ್ಲಿ 130 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಉಳಿದ 79,000 ರೈತರಿಗೆ 52 ಕೋಟಿ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.