ಬೆಂಗಳೂರು: ಕರ್ನಾಟಕದಲ್ಲಿ ಅಪಾರ ಪ್ರಮಾಣದ ಮಳೆ ಹಾನಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿ, ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಭಾರಿ ಹಾನಿ ಉಂಟಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನನಗೆ ಕರೆ ಮಾಡಿ ಮಾಹಿತಿ ಪಡೆದರು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಬಗ್ಗೆ ಪ್ರಧಾನಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ. ಮನೆ, ಬೆಳೆ, ಜೀವ ಹಾನಿ, ಪ್ರವಾವ ಪರಿಸ್ಥಿತಿ ಮತ್ತು ಬೆಂಗಳೂರಿನ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.