alex Certify BIG NEWS: ʼಪೋಸ್ಕೋʼ ಕಾಯ್ದೆ ವಿಚಾರದಲ್ಲಿ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಪೋಸ್ಕೋʼ ಕಾಯ್ದೆ ವಿಚಾರದಲ್ಲಿ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಲಹಾಬಾದ್​ ಹೈಕೋರ್ಟ್​ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮಗುವಿನ ಜೊತೆ ಮಾಡಲಾಗುವ ಮುಖ ಮೈಥುನವನ್ನು ಗಂಭೀರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ಆರೋಪಿಗೆ ನೀಡಲಾದ ಶಿಕ್ಷೆಯನ್ನು ಕಡಿಮೆ ಮಾಡಿದೆ.

ಹೈಕೋರ್ಟ್​ ಇಂತಹ ಅಪರಾಧಗಳನ್ನು ಪೋಸ್ಕೋ ಕಾಯ್ದೆಯ ನಾಲ್ಕರ ಅಡಿಯಲ್ಲಿ ಶಿಕ್ಷಾರ್ಹ ಎಂದು ಹೇಳಿದೆ. ಆದರೆ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಈ ಕೃತ್ಯವು ಗಂಭೀರ ಲೈಂಗಿಕ ದೌರ್ಜನ್ಯ ಅಲ್ಲ ಎಂದು ಹೇಳಿದೆ.

ಹೀಗಾಗಿ ಸೆಕ್ಷನ್​ 6 ಹಾಗೂ 10ರ ಅಡಿಯಲ್ಲಿ ಶಿಕ್ಷೆಯನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ ಅಲಹಾಬಾದ್​ ಹೈಕೋರ್ಟ್​ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಇಳಿಸಿದೆ. ಇದರ ಜೊತೆಯಲ್ಲಿ 5000 ರೂಪಾಯಿ ದಂಡ ಕೂಡ ವಿಧಿಸಿದೆ.

ಝಾನ್ಸಿ ನ್ಯಾಯಾಲಯವು ಪ್ರಕಟಿಸಿದ್ದ ತೀರ್ಪನ್ನು ಪ್ರಶ್ನಿಸಿ ಅಪರಾಧಿ ಸೋನು ಕಶ್ವಾಹ ಹೈಕೋರ್ಟ್​ ಮೆಟ್ಟಿಲೇರಿದ್ದನು. ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿಲ್​ ಕುಮಾರ್​ ಓಜಾ ನೇತೃತ್ವದ ಏಕ ಸದಸ್ಯ ನ್ಯಾಯಪೀಠವು ಈ ನಿರ್ಧಾರವನ್ನು ಪ್ರಕಟಿಸಿದೆ.

ಝಾನ್ಸಿ ನ್ಯಾಯಾಲಯವು ಸೆಕ್ಷನ್​ 377(ಅಸ್ವಾಭಾವಿಕ ಲೈಂಗಿಕ ಕ್ರಿಯೆ), 506( ಕ್ರಿಮಿನಲ್ ಬೆದರಿಕೆ) ಹಾಗೂ ಪೋಸ್ಕೋ ಕಾಯ್ದೆ ಸೆಕ್ಷನ್​ 6ರ ಅಡಿಯಲ್ಲಿ ಅಪರಾಧಿಗೆ ಶಿಕ್ಷೆಯನ್ನು ಪ್ರಕಟಿಸಿತ್ತು.

ಮುಖ ಮೈಥುನವು ಪೋಸ್ಕೋ ಕಾಯ್ದೆಯ ಸೆಕ್ಷನ್​ 6ರ ಅಡಿಯಲ್ಲಿ ಬರುತ್ತದೆಯೇ ಎಂದು ಪ್ರಶ್ನಿಸಿ ಅಪರಾಧಿಯು ಅಲಹಬಾಬಾದ್​ ಹೈಕೋರ್ಟ್ ಮೆಟ್ಟಿಲೇರಿದ್ದನು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಇದು ಪೋಸ್ಕೋ ಕಾಯ್ದೆಯ ಸೆಕ್ಷನ್​ 4ರ ಅಡಿಯಲ್ಲಿ ಬರುತ್ತದೆ ಎಂದು ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...