ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಜು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯ ಬಿಜೆಪಿ ವತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದು, ಮಂಡ್ಯ ಜಿಲ್ಲೆಯ ಜವಾಬ್ದಾರಿಗಳಿಂದ ಮಂಜು ಅವರನ್ನು ಮುಕ್ತಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಬಿಜೆಪಿ ಪ್ರಭಾರಿ ಮತ್ತು ಪಕ್ಷದ ಜವಾಬ್ದಾರಿಗಳಿಂದ ಮಂಜು ಅವರನ್ನು ಮುಕ್ತಗೊಳಿಸಲಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಅವರ ಪುತ್ರ ಮಂಥರ್ ಗೌಡ ಅವರಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.