alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ.30 ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ.30 ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

ಕಲಬುರಗಿ: ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ(ಜೀವ ಮಾಪಕ/ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಸಿಕೊಳ್ಳುವುದು ಅತೀ ಅವಶ್ಯವಿರುವ ಹಿನ್ನೆಲೆಯಲ್ಲಿ ಇನ್ನುಳಿದ ಪಡಿತರ ಚೀಟಿದಾರರು 2021 ರ ನವೆಂಬರ್ 30 ರವರೆಗೆ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಹೇಳಲಾಗಿದೆ.

ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕು.

ಅಫಜಲಪುರ ತಾಲೂಕಿನಲ್ಲಿ 99 ನ್ಯಾಯಬೆಲೆ ಅಂಗಡಿಗಳಲ್ಲಿರುವ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಅಂತ್ಯೋದಯ ಅನ್ನ ಪಡಿತರ ಚೀಟಿ, ಆಧ್ಯತಾ ಪಡಿತರ ಚೀಟಿ, ಆದ್ಯತೇತರ ಪಡಿತರ ಚೀಟಿಗಳ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳಲು ಅಫಜಲಪುರ ತಹಶೀಲ್ದಾರರಾದ ನಾಗಮ್ಮ ಶರಣಪ್ಪ ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...